ಶ್ರೀ ಕ್ಷೇತ್ರ ಉಕ್ಕಡಗಾತ್ರಿ

ಶ್ರೀ ಕ್ಷೇತ್ರ ಉಕ್ಕಡಗಾತ್ರಿಯು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ಗ್ರಾಮದಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದೆ. ಈ ಕ್ಷೇತ್ರವು ಕರಿ ಬಸವೇಶ್ವರ ಅಜ್ಜಯ್ಯ ದೇವರಿಗೆ ಸಮರ್ಪಿತವಾದ ದೇವಾಲಯವನ್ನು ಹೊಂದಿದೆ. ಈ ದೇವಾಲಯವು ತುಂಗಭದ್ರಾ ನದಿಯ ತಟದಲ್ಲಿದ್ದು, ರಾಜ್ಯದ ಪ್ರಮುಖ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ.

ಶ್ರೀ ಕ್ಷೇತ್ರ ಉಕ್ಕಡಗಾತ್ರಿಯ ದೂರಗಳು

  • ಬೆಂಗಳೂರು – 300 ಕಿ.ಮೀ
  • ದಾವಣಗೆರೆ – 45 ಕಿ.ಮೀ
  • ಹರಿಹರ – 27 ಕಿ.ಮೀ
  • ಹರಿಹರ ರೈಲ್ವೆ ನಿಲ್ದಾಣ – 27 ಕಿ.ಮೀ

ಇಲ್ಲಿಗೆ ಭೇಟಿ ನೀಡಿದರೆ ಜೀವನದ ಕಷ್ಟಗಳು ನಿವಾರಣೆಯಾಗುತ್ತವೆ ಎಂಬುದು ಭಕ್ತರ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅಜ್ಜಯ್ಯ ಸ್ವಾಮಿಯ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಇಲ್ಲಿ ಆಗಮಿಸುತ್ತಾರೆ. ಅಲ್ಲದೆ, ಇಲ್ಲಿಗೆ ಭೇಟಿ ನೀಡುವುದರಿಂದ ದೆವ್ವ-ಭೂತಗಳ ಕಾಟದಿಂದಲೂ ಮುಕ್ತಿ ದೊರೆಯುತ್ತದೆ ಎಂಬ ನಂಬಿಕೆಯೂ ಭಕ್ತರಲ್ಲಿ ಇದೆ.

ಉಕ್ಕಡಗಾತ್ರಿ ಕ್ಷೇತ್ರವು ರಾಜ್ಯ ಮಾತ್ರವಲ್ಲದೆ ಹೊರರಾಜ್ಯಗಳ ಭಕ್ತರನ್ನೂ ಆಕರ್ಷಿಸುತ್ತದೆ. ಪ್ರತಿವರ್ಷ ಸುಮಾರು 15 ಲಕ್ಷಕ್ಕೂ ಹೆಚ್ಚು ಭಕ್ತರು ಈ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಉಕ್ಕಡಗಾತ್ರಿ ಅಜ್ಜಯ್ಯ ಸ್ವಾಮಿಯ ದರ್ಶನ ಪಡೆದರೆ ತಮ್ಮ ಕಷ್ಟಗಳು ದೂರವಾಗುತ್ತವೆ ಎಂಬ ಭರವಸೆಯೊಂದಿಗೆ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಭಕ್ತರ ಅನುಕೂಲಕ್ಕಾಗಿ ಶ್ರೀಕ್ಷೇತ್ರದಲ್ಲಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಭೇಟಿ ನೀಡಿ
ಹರಿಹರ ತಾಲ್ಲೂಕಿನ ಇತರೆ ಪ್ರವಾಸಿ ಸ್ಥಳಗಳು


Responsive Services Section

ಭೇಟಿ ನೀಡಿ
ದಾವಣಗೆರೆ ಜಿಲ್ಲೆಯ ಇತರೆ ತಾಲ್ಲೂಕು ಪ್ರವಾಸಿ ಸ್ಥಳಗಳು


Responsive Services Section