ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕ

ಸರ್ ಎಮ್ ವಿಶ್ವೇಶ್ವರಯ್ಯ ಅವರು ಜನಿಸಿ ಹುಟ್ಟಿ ಬೆಳೆದ ಊರು ಮುದ್ದೇನಹಳ್ಳಿ, ಎದು ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದೆ. ಮುದ್ದೇನಹಳ್ಳಿಯು ಸರ್ ಎಮ್ ವಿಶ್ವೇಶ್ವರಯ್ಯ ಅವರ ಸ್ಮಾರಕವಾಗಿದ್ದು, ಕುಟುಂಬದ ಒಡೆತನದ ಜಮೀನಿನಲ್ಲಿದೆ, ಅವರು ಜನಿಸಿದ ಮನೆಯನ್ನು ನಂದಿ ಬೆಟ್ಟಗಳ ಹಿನ್ನೆಲೆಯೊಂದಿಗೆ ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಲಾಗಿದೆ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಭಾರತದ ಮೊದಲ ಇಂಜಿನಿಯರ್. ಅವರ ಜನ್ಮದಿನವಾದ ಸೆಪ್ಟೆಂಬರ್ 15 ಅನ್ನು ಭಾರತದಲ್ಲಿ ಪ್ರತಿ ವರ್ಷ ಇಂಜಿನಿಯರ್ ದಿನವನ್ನಾಗಿ ಆಚರಿಸಲಾಗುತ್ತದೆ.

ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕವು ಸುಮಾರು 58 ಕಿ.ಮೀ ದೂರದಲ್ಲಿದೆ. ಚಿಕ್ಕಬಳ್ಳಾಪುರ ನಗರದಿಂದ ಸುಮಾರು 07 ಕಿ.ಮೀ ದೂರದಲ್ಲಿದೆ ಹಾಗೂ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣದಿಂದ 08 ಕಿ.ಮೀ ದೂರದಲ್ಲಿದೆ.

ಸರ್ ಎಂ.ವಿಶ್ವೇಶ್ವರಯ್ಯ ರವರ ಬಗ್ಗೆ ಮಾಹಿತಿ

ವಿಶ್ವೇಶ್ವರಯ್ಯನವರು 15 ಸೆಪ್ಟೆಂಬರ್ 1860 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ ಜನಿಸಿದರು. ವಿಶ್ವೇಶ್ವರಯ್ಯನವರ ತಂದೆ ಶ್ರೀನಿವಾಸ ಶಾಸ್ತ್ರಿ ಮತ್ತು ತಾಯಿ ವೆಂಕಟಲಕ್ಷ್ಮಮ್ಮ. ಅವರ ಪೂರ್ವಜರು ಈಗಿನ ಆಂಧ್ರಪ್ರದೇಶದ ಮೋಕ್ಷಗುಂಡಂ ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ.

ವಿಶ್ವೇಶ್ವರಯ್ಯನವರು ತಮ್ಮ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ಮುಗಿಸಿದರು . 1881 ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿ.ಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.

ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ನೇಮಕಗೊಂಡರು. ಮೈಸೂರಿನ ಕೃಷ್ಣರಾಜ ಸಾಗರ ಅಣೆಕಟ್ಟಿನ ನಿರ್ಮಾಣದ ಜವಾಬ್ದಾರಿಯನ್ನು ಮುಖ್ಯ ಎಂಜಿನಿಯರ್ ಆಗಿದ್ದರು. ಅವರ ಆಳ್ವಿಕೆಯಲ್ಲಿ, ಮೈಸೂರು ಕೃಷಿ, ನೀರಾವರಿ, ಕೈಗಾರಿಕೀಕರಣ, ಶಿಕ್ಷಣ, ಬ್ಯಾಂಕಿಂಗ್ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಯಿತು.

ಭೇಟಿ ನೀಡಿ
ಚಿಕ್ಕಬಳ್ಳಾಪುರ ತಾಲೂಕು ಇತರೆ ಪ್ರವಾಸಿ ಸ್ಥಳಗಳು


Responsive Services Section

ಭೇಟಿ ನೀಡಿ
ಚಿಕ್ಕಬಳ್ಳಾಪುರ ಜಿಲ್ಲೆ ಇತರೆ ತಾಲೂಕು ಪ್ರವಾಸಿ ಸ್ಥಳಗಳು


Responsive Services Section